Home> Career
Advertisement

CBSEಯ ಬಹು ದೊಡ್ಡ ನಿರ್ಧಾರ ! ಇನ್ನು ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ಬರೆಯಬೇಕು 10ನೇ ತರಗತಿ ವಿದ್ಯಾರ್ಥಿಗಳು

CBSE Class 10th Board Exam:  ಇನ್ನು ಮುಂದೆ 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಎರಡು ಬಾರಿ ನಡೆಸಲಿದೆ CBSE.CBSE ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ. 

CBSEಯ ಬಹು ದೊಡ್ಡ ನಿರ್ಧಾರ ! ಇನ್ನು ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ಬರೆಯಬೇಕು 10ನೇ  ತರಗತಿ ವಿದ್ಯಾರ್ಥಿಗಳು

CBSE Class 10th Board Exam: CBSE ಬೋರ್ಡ್ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಸುದ್ದಿ ಇದು. ಇನ್ನು ಮುಂದೆ 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಎರಡು ಬಾರಿ ನಡೆಸಲಿದೆ CBSE. ಈ  ಬಗ್ಗೆ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಮಾಹಿತಿಯನ್ನು ನೀಡಿದ್ದಾರೆ. ಮುಂದಿನ ವರ್ಷ ಅಂದರೆ 2026 ರಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಯಲಿದೆ.  

ಈ ಪರೀಕ್ಷೆಗಳು ಯಾವಾಗ ನಡೆಯುತ್ತವೆ? : 
ಮಂಡಳಿಯ ಪ್ರಕಟಣೆಯ ಪ್ರಕಾರ, ಮೊದಲ ಪರೀಕ್ಷೆ ಫೆಬ್ರವರಿಯಲ್ಲಿ ನಡೆಯಲಿದ್ದು, ಏಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎರಡನೇ ಪರೀಕ್ಷೆ ಮೇ ತಿಂಗಳಲ್ಲಿ ನಡೆಯಲಿದ್ದು, ಜೂನ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎರಡನೇಯ ಪರೀಕ್ಷೆ ಮೂಲಕ ತಮ್ಮ ಅಂಕಗಳನ್ನು ಹೆಚ್ಚಿಸಲು ಮತ್ತೊಂದು ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಹೀಗೆ  ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಎರಡು ಭಾಷೆಗಳಲ್ಲಿ ಯಾವುದಾದರೂ ಒಂದರಲ್ಲಿ ಮೂರು ವಿಷಯಗಳಿಗೆ ಎರಡನೇ ಪರೀಕ್ಷೆ ಬರೆಯಬಹುದು.

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ ಒಂದರಿಂದ 10ನೇ ತರಗತಿವರೆಗೆ 25,000 ರೂ. ವಿದ್ಯಾರ್ಥಿವೇತನ!!

ಮೊದಲ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ : 
ಸಂಯಮ್ ಭಾರದ್ವಾಜ್ ಅವರ ಪ್ರಕಾರ, 10ನೇ ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯ ಮೊದಲ ಹಂತದಲ್ಲಿ ಹಾಜರಾಗುವುದು ಅವಶ್ಯಕ. ಆದರೆ, ಎರಡನೇ ಹಂತವು ಐಚ್ಛಿಕವಾಗಿರುತ್ತದೆ. ಅಂದರೆ, ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ನೀಡಲು ಬಯಸುತ್ತಾರೆಯೋ ಅಥವಾ ಇಲ್ಲವೋ ಎನ್ನುವುದು ಅವರ ಇಷ್ಟಕ್ಕೆ ಬಿಟ್ಟದ್ದು. ಆದರೆ, ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರೆ ಅದನ್ನು ಹೆಚ್ಚಿಕೊಳ್ಳಲು ಇಲ್ಲಿ ಅವಕಾಶ ಸಿಗುತ್ತದೆ. ಒಂದೇ ಶೈಕ್ಷಣಿಕ ವರ್ಷದೊಳಗೆ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. 

ಇನ್ನು CBSE 2026ರ ಆಂತರಿಕ ಮೌಲ್ಯಮಾಪನಗಳನ್ನು ಅಂದರೆ ಇಂಟರ್ ನಲ್ ಅಸೆಸ್ ಮೆಂಟನ್ನು ಒಮ್ಮೆ ಮಾತ್ರ ನಡೆಸುತ್ತದೆ ಎನ್ನುವುದು ಗಮನಾರ್ಹ.  

ಇದನ್ನೂ ಓದಿ : ಲಕ್ಷ ಲಕ್ಷ ಫೀಸ್ ಕಟ್ಟಬೇಕಿಲ್ಲ!ಈ ಕಾಲೇಜಿನಲ್ಲಿ MBBSಗೆ ಕೇವಲ 70,000 ರೂ. ಶುಲ್ಕ !ಬಡವರ ಮಕ್ಕಳೂ ಇಲ್ಲಿ ವೈದ್ಯರಾಗಬಹುದು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Read More