Home> Health
Advertisement

ಮೂಲದಿಂದಲೇ ಯೂರಿಕ್ ಆಮ್ಲವನ್ನ ನಿಯಂತ್ರಿಸಲು ʼಈʼ ಮನೆಮದ್ದುಗಳನ್ನ ಟ್ರೈ ಮಾಡಿ!!

Home Remedies for Uric Acid: ಹೆಚ್ಚಿದ ಯೂರಿಕ್ ಆಮ್ಲವು ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ, ಇದು ಕೀಲುಗಳಲ್ಲಿ ಊತ ಮತ್ತು ನೋವಿನ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಹಾರ ಪದ್ಧತಿಯನ್ನು ಸುಧಾರಿಸುವುದರ ಜೊತೆಗೆ, ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಅತ್ಯುತ್ತಮ ಮನೆಮದ್ದುಗಳನ್ನು ಪ್ರಯತ್ನಿಸಿ.

ಮೂಲದಿಂದಲೇ ಯೂರಿಕ್ ಆಮ್ಲವನ್ನ ನಿಯಂತ್ರಿಸಲು ʼಈʼ ಮನೆಮದ್ದುಗಳನ್ನ ಟ್ರೈ ಮಾಡಿ!!

Home Remedies for Uric Acid: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಹದಗೆಡುತ್ತಿರುವುದರಿಂದ, ಅನೇಕ ಜನರು ವಿವಿಧ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಅದರಲ್ಲಿ ಒಂದು ಅಧಿಕ ಯೂರಿಕ್ ಆಮ್ಲ. ಆಹಾರ ಪದ್ಧತಿಯಲ್ಲಿನ ಅಜಾಗರೂಕತೆಯಿಂದ ದೇಹದಲ್ಲಿ ಯೂರಿಕ್ ಆಮ್ಲ ವೇಗವಾಗಿ ಹೆಚ್ಚಾಗುತ್ತದೆ. ವಾಸ್ತವವಾಗಿ ಪ್ಯೂರಿನ್ ಸಮೃದ್ಧವಾಗಿರುವ ಆಹಾರದ ಸೇವನೆ ಹೆಚ್ಚಾದಾಗ, ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾಗಲು ಪ್ರಾರಂಭವಾಗುತ್ತದೆ.

ಹೀಗಾಗಿ ಮೂತ್ರಪಿಂಡವು ಅದನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಗುವುದಿಲ್ಲ. ಇದರಿಂದ ಹೆಚ್ಚಿದ ಯೂರಿಕ್ ಆಮ್ಲವು ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಹೀಗಾಗಿ ಕೀಲುಗಳಲ್ಲಿ ಊತ ಮತ್ತು ನೋವಿನ ಸಮಸ್ಯೆ ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಹಾರ ಪದ್ಧತಿಯನ್ನು ಸುಧಾರಿಸುವುದರ ಜೊತೆಗೆ, ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಅತ್ಯುತ್ತಮ ಮನೆಮದ್ದುಗಳನ್ನು ಪ್ರಯತ್ನಿಸಿ.

ಇದನ್ನೂ ಓದಿ: ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನೋ ಮೊದಲು ಎಚ್ಚರ... ಕಲ್ಲಂಗಡಿ ಕೆಂಪಾಗಿಸಲು ಕೃತಕ ಬಣ್ಣ: ವೈದ್ಯರು ಹೇಳಿದ್ದೇನು... ವಾಚ್ ವಿಡಿಯೋ 

ಯೂರಿಕ್ ಆಮ್ಲ ನಿಯಂತ್ರಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ

ನೆಲ್ಲಿಕಾಯಿ: ಆಮ್ಲಾ ಅಥವಾ ನೆಲ್ಲಿಕಾಯಿ ಯೂರಿಕ್ ಆಮ್ಲಕ್ಕೆ ರಾಮಬಾಣ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ʼಸಿʼ ಸಮೃದ್ಧವಾಗಿದ್ದು, ಇದು ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿ ರಸವನ್ನು ಅಲೋವೆರಾ ರಸದೊಂದಿಗೆ ಬೆರೆಸಿ ಕುಡಿದರೆ ನೀವು ಪ್ರಯೋಜನ ಪಡೆಯುತ್ತೀರಿ.

ಅಜವಾನ: ನಿಯಮಿತವಾಗಿ ಅಜವಾನ ಸೇವಿಸುವುದರಿಂದ ಯೂರಿಕ್ ಆಮ್ಲದ ಮಟ್ಟ ಕ್ರಮೇಣ ಕಡಿಮೆಯಾಗುತ್ತದೆ. ಇದನ್ನು ಅಡುಗೆ ಮಾಡುವಾಗಲೂ ಬಳಸಬಹುದು. 

ನಿಂಬೆ ನೀರು: ನಿಂಬೆ ನೀರು ಕುಡಿಯುವುದು ಸಹ ಯೂರಿಕ್‌ ಆಮ್ಲದಲ್ಲಿ ಪ್ರಯೋಜನಕಾರಿ. ನಿಂಬೆಹಣ್ಣಿನಲ್ಲಿ ವಿಟಮಿನ್ ʼಸಿʼ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಆಮ್ಲೀಯ ಪರಿಣಾಮವನ್ನು ಉಂಟುಮಾಡುತ್ತದೆ, ಇದು ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. ಬೆಳಗ್ಗೆ ಎದ್ದ ನಂತರ ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆಹಣ್ಣು ಹಿಂಡಿ ಸೇವಿಸಿರಿ.

ಇದನ್ನೂ ಓದಿ: ಈ 5 ಪಾನೀಯಗಳನ್ನು ನೀವು ತಪ್ಪದೆ ಸೇವಿಸಿ ಅವು ನಿಮ್ಮ ದೇಹವನ್ನು ಶುದ್ಧೀಕರಿಸುತ್ತವೆ..!

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More