PM Narendra Modi Live news updates : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಂಡ ನಂತರ "ಆಪರೇಷನ್ ಸಿಂಧೂರ್" ಹಾಗೂ ಕದನ ವಿರಾಮದ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಮೊದಲಬಾರಿಗೆ ಮಾತನಾಡಲಿದ್ದಾರೆ. ಮೋದಿ ದೇಶವಾಸಿಗಳಿಗೆ ಏನು ಹೇಳುತ್ತಾರೆ..? ಪಾಕಿಸ್ತಾನಕ್ಕೆ ಯಾವ ಎಚ್ಚರಿಕೆ ನೀಡುತ್ತಾರೆ..? ಎನ್ನುವುದನ್ನು ತಿಳಿಯಲು ದೇಶದ ಜನರು ಕುತೂಹಲರಾಗಿದ್ದಾರೆ. ಭಯೋತ್ಪಾದನೆಯನ್ನು ಕೊನೆಗೊಳಿಸಲು ಆಪರೇಷನ್ ಸಿಂಧೂರ್ ಮೂಲಕ ತೆಗೆದುಕೊಂಡ ಕ್ರಮಗಳನ್ನು ಪ್ರಧಾನಿ ಮೋದಿ ಜನರಿಗೆ ವಿವರಿಸಲಿದ್ದಾರೆ. ಇದರ ಮಧ್ಯ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರನ್ನು ಹತ್ತಿಕ್ಕುವುದಾಗಿ ಮತ್ತು ಯಾರೂ ನಿರೀಕ್ಷಿಸದ ರೀತಿಯಲ್ಲಿ ಭಯೋತ್ಪಾದಕರನ್ನು ಶಿಕ್ಷಿಸುವುದಾಗಿ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಪಾಕಿಸ್ತಾನದ ಮೇಲೆ ಸೇಡು ತೀರಿಸಿಕೊಂಡಿತು. ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಪ್ರಮುಖ ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ನಾಶಪಡಿಸಿತು. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು. ನಂತರ, ಎರಡೂ ದೇಶಗಳ ನಡುವೆ ಉದ್ವಿಗ್ನತೆ ಉಂಟಾಯಿತು. ಈ ಸಂದರ್ಭದಲ್ಲಿ ಪಾಕಿಸ್ತಾನ ಮಧ್ಯಪ್ರವೇಶಿಸಿ ಎರಡೂ ದೇಶಗಳ ನಡುವೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಇಂದು ಬೆಳಿಗ್ಗೆ ಪ್ರಧಾನ ಮಂತ್ರಿಯವರ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಅನಿಲ್ ಚೌಹಾಣ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒ ಅಧಿಕಾರಿಗಳ ನಡುವಿನ ಮಾತುಕತೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ನಿವಾಸದಲ್ಲಿ ಪ್ರಮುಖ ಸಭೆ ನಡೆಯಿತು.. ಇದೀಗ ಇಂದು ರಾತ್ರಿ 8 ಗಂಟೆಗೆ ಈ ಎಲ್ಲಾ ಬೆಳವಣಿಗೆ ಕುರಿತು ಪ್ರಧಾನಿ ಮೋದಿ ಮಾತನಾಡಲಿದ್ದಾರೆ.. ಈ ಹಿನ್ನೆಲೆಯಲ್ಲಿ ಕ್ಷಣ ಕ್ಷಣದ ಸಂಪೂರ್ಣ ನಿಖರ ಮಾಹಿತಿಗಾಗಿ Zee Kannada News ಲೈವ್ ಪುಟವನ್ನು ನೋಡುತ್ತೀರಿ..