Home> India
Advertisement

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ದರ್ಶನಕ್ಕೆ ಇನ್ಮುಂದೆ ದಿನವಿಡೀ ಕಾಯಬೇಕಿಲ್ಲ...

Good News: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್‌ ನ್ಯೂಸ್‌ ಒಂದಿದೆ.  ದೇವರ ದರ್ಶನಕ್ಕೆ ನೀವು ಇನ್ಮುಂದೆ ದಿನವಿಡೀ ಕಾಯಬೇಕಿಲ್ಲ, ಯಾಕಂದ್ರೆ ಅತ್ಯಂತ ಕಡಿಮೆ ಸಮಯದಲ್ಲಿ ಭಕ್ತರಿಗೆ ದರ್ಶನ ನೀಡಲು ಹೊಸ ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಟಿ‌ಟಿ‌ಡಿ ಮುಂದಾಗಿದೆ. 

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ದರ್ಶನಕ್ಕೆ ಇನ್ಮುಂದೆ ದಿನವಿಡೀ ಕಾಯಬೇಕಿಲ್ಲ...

Good News For Tirupati Tirumala Devotees: ಕಲಿಗಾಲದಲ್ಲಿ ಈಗೇನಿದ್ರೂ ತಂತ್ರಜ್ಞಾನದ್ದೇ ಹವಾ. ಈ ಡಿಜಿಟಲ್ ಜಗತ್ತಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಇದೀಗ ತಿಮ್ಮಪ್ಪನ ಭಕ್ತರ ನೆರವಿಗೂ ಬರಲಿದೆ. ಕೋಟ್ಯಾಂತರ ಭಕ್ತರನ್ನು ತನ್ನತ್ತ ಸೆಳೆಯುವ ತಿರುಮಲ ತಿರುಪತಿ ದೇವಾಯಲವು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಸಜ್ಜಾಗಿದೆ. ಈ ಮೂಲಕ ಇಡೀ ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ ದೇವಾಲಯದಲ್ಲಿ  AI ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ದೇವಾಲಯ ಎನ್ನುವ ಕೀರ್ತಿಗೂ ಟಿ‌ಟಿ‌ಡಿ ಪಾತ್ರವಾಗಲಿದೆ. 

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌  ಎಂಬ ತಂತ್ರಜ್ಞಾನದ ಮೂಲಕ ಇನ್ಮುಂದೆ ತಿರುಪತಿ ತಿಮ್ಮಪ್ಪನ ಭಕ್ತರಿಗೆ ದೇವರ ದರ್ಶನಕ್ಕಾಗಿ ದಿನವಿಡೀ ಕಾಯುವ ಸಮಸ್ಯೆಯಿಂದಲೂ ಪರಿಹಾರ ಪಡೆಯಲಿದ್ದಾರೆ. ಟಿ‌ಟಿ‌ಡಿ ದೇವಾಲಯಕ್ಕೆ ಪ್ರತಿ ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಇವರೆಲ್ಲರ ಬಯಕೆ ಒಂದೇ ಆಗಿರುತ್ತದೆ. ಅದುವೇ ಆದಷ್ಟು ಬೇಗ ಏಳುಕುಂಡಲವಾಡ ತಿರುಪತಿ ತಿಮ್ಮಪ್ಪ ದರ್ಶನ ಪಡೆಯುವುದು. ಇದೀಗ AI ತಂತ್ರಜ್ಞಾನವು ಭಕ್ತರ ಕಾಯುವ ಸಮಯವನ್ನು ಕಡಿಮೆಗೊಳಿಸಲು ಸಹಾಯಕವಾಗಲಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ರಾಜ್ಯದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್!

ತಿರುಮಲಕ್ಕೆ ಭೇಟಿ ನೀಡುವ ಭಕ್ತಾಧಿಗಳಿಗೆ ಕಡಿಮೆ ಸಮಯದಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (TTD) ಸಾಕಷ್ಟು ಹೊಸ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುತ್ತಲೇ ಇದೆ. ಆದರೆ ದಿನಕಳೆದಂತೆ ತಿರುಪತಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದರಿಂದ ಈ ವೇಳೆ ಭಕ್ತಾದಿಗಳ ಸಮಯ ಉಳಿಸಲು ಹಾಗೂ ಆದಷ್ಟು ಬೇಗ ದೇವರ ದರ್ಶನಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಟಿ‌ಟಿ‌ಡಿ ಇದೀಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ನ ಮೊರೆ ಹೋಗುತ್ತಿದೆ.

ಕಡಿಮೆ ಸಮಯದಲ್ಲಿ ಭಕ್ತರಿಗೆ ತಿಮ್ಮಪ್ಪನ ದರ್ಶನ ಸಿಗುವಂತಾಗಬೇಕು ಎಂಬ ಸದುದ್ದೇಶದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌- ಎಐ ಆಧಾರಿತ ಸೌಲಭ್ಯ ತರಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕಾಗಿ ಟಿ‌ಟಿ‌ಡಿ ಗೂಗಲ್ ಇಂಕ್ ಜೊತೆ ಮಹತ್ವದ ಒಪ್ಪಂದವನ್ನೂ ಮಾಡಿಕೊಂಡಿದೆ. 

ಲಭ್ಯವಿರುವ ಮಾಹಿತಿಗಳ ಪ್ರಕಾರ,  ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಮೂಲಕ ಟಿ‌ಟಿ‌ಡಿ ಭಕ್ತರ ಪ್ರವಾಸ, ತಿಮ್ಮಪ್ಪನ ದರ್ಶನದ ವ್ಯವಸ್ಥೆಯಂತಹ ಸೌಕರ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ನೀಡಲು ಬಯಸಿದೆ. 

ಇದನ್ನೂ ಓದಿ- ತಿರುಪತಿ ತಿರುಮಲದಲ್ಲಿ ಹಿರಿಯ ನಾಗರಿಕರಿಗೆ ಉಚಿತ ವಿಶೇಷ ದರ್ಶನ ವ್ಯವಸ್ಥೆ!ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ!ನಿಂತ ಜಾಗಕ್ಕೆ ಬರುವುದು ಊಟ, ಹಾಲು

ಇನ್ನೂ ತಿರುಮಲದಲ್ಲಿ ನಡೆದ ಟಿಟಿಡಿ ಟ್ರಸ್ಟ್ ಮಂಡಳಿಯ ಸಭೆ ಬಳಿಕ ಈ ಬಗ್ಗೆ ಮಾತನಾಡಿರುವ ಟಿ‌ಟಿ‌ಡಿ ಅಧ್ಯಕ್ಷ ಬಿ.ಆರ್. ನಾಯ್ಡು, ತಿರುಪತಿಗೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಯಾವುದೇ ವಿಚಾರದಲ್ಲಿ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಸಹಾಯಕವಾಗಲಿದೆ. ಇನ್ನೂ ಇಡೀ ವಿಶ್ವದಲ್ಲೇ ಭಕ್ತರಿಗಾಗಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಅಳವಡಿಸಿಕೊಂಡಿರುವ ಮೊಟ್ಟ ಮೊದಲ ದೇವಾಲಯ ಎಂಬ ಕೀರ್ತಿಗೆ ಟಿ‌ಟಿ‌ಡಿ ಪಾತ್ರವಾಗಲಿದೆ ಎಂದು ಹೆಮ್ಮೆಯಿಂದ ನುಡಿದಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Read More