Shocking Murder of 5-Year-Old in Hubballi: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಬಿಹಾರ ಮೂಲದ ರಿತೇಶ್ ಕುಮಾರ್‌ನ ಅಂತ್ಯಸಂಸ್ಕಾರ ಶನಿವಾರ ನಡೆಯಿತು. 20 ದಿನಗಳ ನಂತರ ಸಿಐಡಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ಏಪ್ರಿಲ್ 13ರಂದು ರಿತೇಶ್ ಕುಮಾರ್ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ ಉಗ್ರ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಒತ್ತಡಕ್ಕೊಳಗಾಗಿದ್ದ ಅಶೋಕ ನಗರ ಠಾಣೆ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿ ಸಂಜೆ ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ: MBBS ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್ ಲವ್; ಕಿಡ್ನಾಪ್ ಮಾಡಿ ಬರ್ಬರ ಹತ್ಯೆ!
ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಆತ ಇದ್ದ ಶೆಡ್ ಬಳಿ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಸಹ ಆರೋಪಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದ. ಹೀಗಾಗಿ ಪೊಲೀಸರು ಆತನಿಗೆ ಗುಂಡು ಹಾರಿಸಿದ್ದರು. ಈ ವೇಳೆ ಆರೋಪಿ ಮೃತಪಟ್ಟಿದ್ದ. ಈ ನಡುವೆ ಆರೋಪಿಯ ಶವವನ್ನ ಅಂತ್ಯಸಂಸ್ಕಾರ ಮಾಡಬಾರದು, ಸಾಕ್ಷ್ಯ ನಾಶವಾಗಬಹುದು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿತ್ತು. ಹೀಗಾಗಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ರಿತೇಶ್ ಕುಮಾರ್‌ನ ಮೃತದೇಹವನ್ನು KMCRI ಶವಾಗಾರದ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡಲಾಗಿತ್ತು.
ಶವ ಕೊಳೆಯುತ್ತಾ ಬಂದ ಹಿನ್ನೆಲೆ ಸಿಐಡಿ ಪೊಲೀಸರಿಗೆ ಶವ ಡಿಕಾಂಪೋಸ್ ಆಗುತ್ತಿದೆ. ಹೀಗಾಗಿ ಅದನ್ನು ವಶಕ್ಕೆ ತೆಗೆದುಕೊಳ್ಳುವಂತೆ KMCRI ಪತ್ರ ಬರೆದಿತ್ತು. ಸಿಐಡಿ ಪೊಲೀಸರು ಶವದ ಸಮಾಧಿ ಮಾಡುವ ಅಗತ್ಯವಿದ್ದು, ಶವ ಕೊಳೆಯುತ್ತಿದೆ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಅಲ್ಲದೇ ರಿತೇಶ್ ಕುಮಾರ್ ಮೃತದೇಹವನ್ನು ಮುಂದಿನ ತನಿಖೆಗೆ ಲಭ್ಯವಾಗುವಂತೆ ದಹನ ಮಾಡದೆ ಸಮಾಧಿ ಮಾಡಲಾಗುವುದು ಎಂದೂ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.
ಇದನ್ನೂ ಓದಿ: ದ್ವಿತೀಯ ಪಿಯುಸಿಯಲ್ಲಿ ಶೇ.79ರಷ್ಟು ಅಂಕ ಬಂದ್ರೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!!
ವಿಚಾರಣೆ ನಡೆಸಿದ್ದ ಕೋರ್ಟ್ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡಿ, ಶವವನ್ನು ಹೂಳಬೇಕೆಂದು ಆದೇಶಿಸಿತ್ತು. KMCRI ಶವಗಾರದಲ್ಲಿದ್ದ ಶವವನ್ನು ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ವಿಡಿಯೋ ರೆಕಾರ್ಡ್ ಮೂಲಕ ನಗರದ ಹೊರವಲಯದ ಬಿಡನಾಳ ಸ್ಮಶಾನಕ್ಕೆ ಸಾಗಿಸಲಾಯಿತು. ಮಹಾನಗರ ಪಾಲಿಕೆ ಸಿಬ್ಬಂದಿ ಶವವನ್ನು ಸ್ಮಶಾನದಲ್ಲಿ ಹೈಕೋರ್ಟ್ ಆದೇಶದಂತೆ ಅಂತ್ಯ ಸಂಸ್ಕಾರ ಮಾಡಿದರು. ಸಿಐಡಿ ಎಸ್ಪಿ ವೆಂಕಟೇಶ್, ಶಹರ ತಹಶೀಲ್ದಾರ್ ಕಲ್ಲನಗೌಡ ಹಾಗೂ ಎಸಿಪಿ ಶಿವಪ್ರಕಾಶ್ ನಾಯಕ್ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ.
ಆರೋಪಿಯ ಕುಟುಂಬಸ್ಥರು ಪತ್ತೆಯಾಗಿಲ್ಲ!!
ಆರೋಪಿಯ ರಿತೇಶ್ ಕುಮಾರ್‌ನ ಮೂಲ ಹುಡುಕಲು ಪೊಲೀಸರು ಸಾಕಷ್ಟು ಪ್ರಯತ್ನ ಪಟ್ಟರಾದರೂ ಪ್ರಯೋಜನವಾಗಿಲ್ಲ. ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧೆಡೆ ತೆರಳಿ ಆತನ ಕುಟುಂಬಸ್ಥರನ್ನು ಹುಡುಕಾಡಲಾಗಿದೆ. ಆದರೆ ಆತನ ಕುಟುಂಬಸ್ಥರು ಪತ್ತೆಯಾಗಿರಲಿಲ್ಲ. ಹೀಗಾಗಿ ಪೊಲೀಸರೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.