Dengue and chikungunya outbreak amid Corona: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಡೆಂಘಿ ಜ್ವರದ ಪ್ರಕರಣಗಳು ಉಲ್ಬಣಗೊಂಡಿದ್ದು ನೂರಾರು ಜನರಲ್ಲಿ ಡೆಂಘಿ ದೃಢಪಟ್ಟಿದೆ.
ಒಂದೆಡೆ ದೇಶಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಉಂಟುಮಾಡಿದೆ. ಮತ್ತೊಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಘಿ ಹಾಗೂ ಚಿಕನ್ ಗೂನ್ಯಾ ಪ್ರಕರಣಗಳು ಸಹ ಹೆಚ್ಚಳವಾಗುತ್ತಿದೆ.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ನೂರರ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 40 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 126 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 395 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು ನಿನ್ನೆಗೆ ಹೊಲಿಸಿದರೆ ಇಂದು ಕೊರೋನಾ ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ದಾಖಲೆಗಳ ಪ್ರಕಾರ, ಕೊರೋನಾ ಪಾಸಿಟಿವ್ ರೇಟ್ 10.12%ಗೆ ಏರಿಕೆ ಕಂಡಿದೆ.
ಕೊರೋನಾ ಜೊತೆಗೆ ಡೆಂಘಿ ಮತ್ತು ಚಿಕುನ್ ಗುನ್ಯಾ ಹರಡುತ್ತಿವೆ. ಈ ಹಿನ್ನಲೆಯಲ್ಲಿ ಜನರು ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
25 ಸಾವಿರಕ್ಕೂ ಅಧಿಕ ಡೆಂಘಿ ಟೆಸ್ಟ್ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ಜನರಲ್ಲಿ ಡೆಂಘಿ ಜ್ವರ ಪತ್ತೆಯಾಗಿದೆ. 366 ಜನರಲ್ಲಿ ಚಿಕನ್ ಗುನ್ಯಾ ದೃಢಪಟ್ಟಿದೆ ಎಂದು ಅಧಿಕೃತ ಮಾಹಿತಿಗಳು ಲಭ್ಯವಾಗಿವೆ.
ಮುಂಗಾರು ಮಳೆ ಎಫೆಕ್ಟ್ ಹಿನ್ನೆಲೆ ಬೆಂಗಳೂರು ಹಾಗೂ ರಾಜ್ಯದಲ್ಲಿ ಡೆಂಘಿ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಮುನ್ನಲೆಗೆ ಬರುತ್ತಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.