Home> Sports
Advertisement

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಕ್ಕೆ ಕೆ.ಎಲ್.ರಾಹುಲ್‌ ಹೇಳಿದ್ದೇನು?

Axar Patel: ಐಪಿಎಲ್ 2025ಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಸೂಪರ್ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ನೇಮಿಸಲಾಗಿದೆ. ಕಳೆದ ಋತುವಿನಲ್ಲಿ ಅವರು ಒಂದು ಪಂದ್ಯದಲ್ಲಿ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಕ್ಕೆ ಕೆ.ಎಲ್.ರಾಹುಲ್‌ ಹೇಳಿದ್ದೇನು?

Delhi Capitals Captain: 2025ರ ಐಪಿಎಲ್ ಟೂರ್ನಿಯ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದಕ್ಕೂ ಮುನ್ನವೇ ಎಲ್ಲಾ ತಂಡಗಳು ತಮ್ಮ ನಾಯಕರ ಹೆಸರನ್ನು ಘೋಷಿಸಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರಿಗೆ ತಂಡದ ಜವಾಬ್ದಾರಿಯನ್ನು ವಹಿಸಿದೆ. ಫಾಫ್ ಡು ಪ್ಲೆಸಿಸ್ ಮತ್ತು ಕೆ.ಎಲ್.ರಾಹುಲ್ ಅವರಂತಹ ಅನುಭವಿ ಆಟಗಾರರು ತಂಡದಲ್ಲಿದ್ದರು. ಕಳೆದ ಋತುವಿನಲ್ಲಿ ಅಕ್ಷರ್ ಡೆಲ್ಲಿ ತಂಡದ ಉಪನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದರು. ಅವರ ಪ್ರದರ್ಶನವೂ ಅತ್ಯುತ್ತಮವಾಗಿದೆ. ಡೆಲ್ಲಿ ತಂಡದ ನಾಯಕರಾಗಿ ಅಕ್ಷರ್‌ ಪಟೇಲ್‌ ಆಯ್ಕೆಯಾಗಿದ್ದಕ್ಕೆ ಕನ್ನಡಿಗ ಕೆ.ಎಲ್.ರಾಹುಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

ತಮ್ಮ ಟ್ವಿಟರ್‌ ಖಾತೆಯಲ್ಲಿ ಅಕ್ಷರ್‌ ಪಟೇಲ್‌ಗೆ ಶುಭಾಶಯ ತಿಳಿಸಿರುವ ಕೆ.ಎಲ್.ರಾಹುಲ್‌, ʼಕಂಗ್ರಾಟ್ಸ್ ಬಾಪು, ನಿಮ್ಮ ಮುಂದಿನ ಪ್ರಯಾಣಕ್ಕೆ ಶುಭಾಶಯಳು. ನಾವು ಯಾವಗಲೂ ನಿಮ್ಮೊಂದಿಗೆ ಇರುತ್ತೇವೆʼ ಎಂದು ಹೇಳಿದ್ದಾರೆ. ರಾಹುಲ್‌ ಮಾಡಿರುವ ಈ ಟ್ವೀಟ್‌ಅನ್ನ ಡೆಲ್ಲಿ ತಂಡವು ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. ಅಂದಹಾಗೆ ರಾಹುಲ್ ಐಪಿಎಲ್ 2024ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದರು. ನಂತರ ಲಕ್ನೋ ತಂಡ ಅವರನ್ನು ಉಳಿಸಿಕೊಳ್ಳಲಿಲ್ಲ. ಇದಾದ ನಂತರ ದೆಹಲಿ ಅವರನ್ನು ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಖರೀದಿಸಿತು. 

ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರನಿಗೆ ಕೊಲೆ ಬೆದರಿಕೆ! ಅಭಿಮಾನಿಗಳೇ ಎದುರಾಳಿಗಳಾದ್ರೆ ಏನು ಮಾಡೋದು?

ಅಕ್ಷರ್ ಪಟೇಲ್‌ಗೆ 16 ಕೋಟಿ ರೂ.

ಅಕ್ಷರ್ ಪಟೇಲ್ 2019ರಿಂದ ಡೆಲ್ಲಿ ಕ್ಯಾಪಿಟಲ್ಸ್‌ನ ಭಾಗವಾಗಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುವುದರಲ್ಲಿ ಮತ್ತು ಅದ್ಭುತವಾಗಿ ಬೌಲಿಂಗ್ ಮಾಡುವುದರಲ್ಲಿ ನಿಪುಣತೆ ಹೊಂದಿದ್ದಾರೆ. ಈ ಕಾರಣಕ್ಕಾಗಿ ದೆಹಲಿ ತಂಡ ಅವರನ್ನು 16 ಕೋಟಿ 50 ಲಕ್ಷ ರೂ.ಗೆ ಉಳಿಸಿಕೊಂಡಿದೆ. ಅಕ್ಷರ್ ಐಪಿಎಲ್‌ನಲ್ಲಿ ನಾಯಕತ್ವದ ಅನುಭವವನ್ನು ಸೀಮಿತಗೊಳಿಸಿದ್ದಾರೆ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಗುಜರಾತ್ ತಂಡದ ನಾಯಕತ್ವ ವಹಿಸಿದ್ದರು. 

ಐಪಿಎಲ್‌ನಲ್ಲಿ 150 ಪಂದ್ಯ ಆಡಿರುವ ಅಕ್ಷರ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾದ ಸಂದರ್ಭದಲ್ಲಿ ಅಕ್ಷರ್ ಪಟೇಲ್ ಖುಷಿ ವ್ಯಕ್ತಪಡಿಸಿದ್ದರು. ʼದೆಹಲಿ ತಂಡದ ನಾಯಕನಾಗಿ ನೇಮಕಗೊಂಡಿರುವುದು ನನಗೆ ಸಿಕ್ಕಿರುವ ದೊಡ್ಡ ಗೌರವʼ ಎಂದು ಹೇಳಿದ್ದರು. ʼನಾನು ಒಬ್ಬ ಕ್ರಿಕೆಟಿಗನಾಗಿ ಸಾಕಷ್ಟು ಪ್ರಗತಿ ಸಾಧಿಸಿದ್ದೇನೆ. ಈ ತಂಡವನ್ನು ಮುನ್ನಡೆಸಲು ನಾನು ಸಿದ್ಧನಿದ್ದೇನೆಂದು ನಾನು ಭಾವಿಸುತ್ತೇನೆʼ ಅಂತಾ ಹೇಳಿದ್ದಾರೆ. ಇಲ್ಲಿಯವರೆಗೆ ಅಕ್ಷರ್ 150 ಐಪಿಎಲ್ ಪಂದ್ಯಗಳಲ್ಲಿ ಒಟ್ಟು 1‌,653 ರನ್ ಗಳಿಸಿದ್ದಾರೆ. ಇದಲ್ಲದೆ ಅವರು 123 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. 

ಇದನ್ನೂ ಓದಿ: IPL 2025: ಐಪಿಎಲ್‌ ಅಟ್ಟಹಾಸಕ್ಕೆ ಬ್ರೇಕ್‌! ಕೇಂದ್ರ ಸರ್ಕಾರದಿಂದ ಬಂದಾಯ್ತು ಖಡಕ್‌ ಸೂಚನೆ! ಯಾವುದಕ್ಕೆಲ್ಲಾ ನಿರ್ಬಂಧ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಪ್ರಶಸ್ತಿ ಗೆದ್ದಿಲ್ಲ!

ಈಗ ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಚೊಚ್ಚಲ ಪ್ರಶಸ್ತಿಯನ್ನು ಗೆಲ್ಲುವ ಜವಾಬ್ದಾರಿಯನ್ನ ಹೊಂದಿದ್ದಾರೆ. ದೆಹಲಿ ತಂಡ ಇದುವರೆಗೆ ಒಮ್ಮೆಯೂ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಈ ತಂಡವು ಐಪಿಎಲ್ 2020ರ ಫೈನಲ್‌ಗೆ ತಲುಪಿತ್ತು, ಆದರೆ ಪ್ರಶಸ್ತಿ ಗೆಲ್ಲುವ ಕನಸನ್ನು ಮುಂಬೈ ತಂಡವು ಭಗ್ನಗೊಳಿಸಿತ್ತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Read More