Home> Technology
Advertisement

ಪಿಎಂ ಇ-ಡ್ರೈವ್: ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ, ಬೆಂಗಳೂರಿಗೆ ಸಿಂಹ ಪಾಲು

PM E Drive: ಪಿಎಂ ಇ-ಡ್ರೈವ್  ಅಡಿಯಲ್ಲಿ  ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ ಮಾಡಲಾಗಿದ್ದು ಇದರಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಸಿಂಹಪಾಲು ಲಭ್ಯವಾಗಿದೆ. 

ಪಿಎಂ ಇ-ಡ್ರೈವ್: ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ, ಬೆಂಗಳೂರಿಗೆ ಸಿಂಹ ಪಾಲು

PM E Drive: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.  ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, 
ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು. ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ- ಮೋದಿ ಸರ್ಕಾರದ ಮಹತ್ವದ ಹೆಜ್ಜೆ: ಅಗ್ಗವಾಗಲಿವೆಯೇ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು...!

ಕರ್ನಾಟಕಕ್ಕೆ 4500 ಬಸ್ ಹಂಚಿಕೆ: ಬೆಂಗಳೂರಿಗೆ ಸಿಂಹಪಾಲು!
ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರಕ್ಕೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.

ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ- ವಂಚನೆಗಳಿಗೆ ಬ್ರೇಕ್ ಹಾಕಲು ಏರ್‌ಟೆಲ್‌ನಿಂದ ಹೊಸ ವೈಶಿಷ್ಟ್ಯ ಪರಿಚಯ...! ಏನೆಲ್ಲಾ ಪ್ರಯೋಜನ ಗೊತ್ತಾ...!

ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.

ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು; ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

Read More