ನಟ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಯಶಸ್ಸಿನ ಬಳಿಕ ಮತ್ತಷ್ಟು ಬಿಝಿ ಆಗಿದ್ದಾರೆ. ಖ್ಯಾತ ರಿಯಾಲಿಟಿ ಶೋ ನಿರೂಪಣೆಗೆ ಮರಳಿರುವ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಅವರ ನಟನೆಯ, ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲಾ ರಂಗ ಬಾಷಾ’ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಅದರ ನಡುವೆ ಅವರು ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯನ್ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರಕ್ಕೆ ‘ಕೆ47’ ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ.ಇನ್ನೂ ಚಿತ್ರದ ಮುಹೂರ್ತ ಕೂಡ ಸೋಮವಾರ ಅದ್ದೂರಿಯಾಗಿ ನೆರವೇರಿದ್ದು, ಈ ಸಂದರ್ಭದ ಸ್ಮಾಲ್ ಜಲಕ್ ನಿಮಗಾಗಿ ಇಲ್ಲಿದೆ...